



ಡೈಲಿ ವಾರ್ತೆ: 12/ಅ./2025

ಆಟ ಆಡುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಬಾಲಕ ಮೃತ್ಯು

ಬೀದರ್: ಆಟ ಆಡುವಾಗ ಬಾವಿಗೆ ಬಿದ್ದು ಬಾಲಕ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ನಡೆದಿದೆ
ಮನೆಯ ಪಕ್ಕದಲ್ಲಿ ಆಟ ಆಡುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರಲಿ ಬಾವಿಗೆ ಬಿದ್ದು ಮೃತಪಟ್ಟಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಬಾಲಕನ ಶವ ರವಾನೆ ಮಾಡಿದ್ದಾರೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.