ಡೈಲಿ ವಾರ್ತೆ: 13/ಅ./2025

ಕುಂದಾಪುರ: ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ – ನಾಲ್ವರು ವಶಕ್ಕೆ, ಮೂವರು ಪರಾರಿ

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮದ್ದುಗುಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಂದರ್ ಬಾಹರ್ ಜುಗಾರಿ‌ ಆಟ ಆಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಮಿಥುನ್ ಖಾರ್ವಿ(35), ಚಂದ್ರ ಪೂಜಾರಿ(45), ರೆಹಮತ್(51), ನಿರಂಜನ್ ನಾಯಕ್(39) ಎಂದು ಗುರುತಿಸಲಾಗಿದೆ. ಅಲ್ಲದೆ ಕಿರಣ, ಹರೀಶ್, ಮಂಜುನಾಥ್ ಈ ಮೂವರು ಪರಾರಿ ಆಗಿದ್ದಾರೆ ಎಂದು ತಿಳಿದುಬಂದಿದೆ.

ಕುಂದಾಪುರ ಪೊಲೀಸ್ ಉಪನಿರೀಕ್ಷಕ ನಂಜಾ ನಾಯ್ಕರಿಗೆ ಬಂದ ಖಚಿತ ಮಾಹಿತಿಯಂತೆ ದಾಳಿ ನಡೆಸಿ
ಅಂದರ್ ಬಾಹರ್ ಜುಗಾರಿ ಆಟಕ್ಕೆ ಉಪಯೋಗಿಸಿದ ಬಿಳಿ ಬಣ್ಣದ ಪಾಲೀಥಿನ್ ಚೀಲ, ಡೈಮಾನ್, ಆಟಿನ್, ಇಸ್ಪೀಟ್ ಎಲೆಗಳು, ನಗದು ರೂ 2660ನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.