



ಡೈಲಿ ವಾರ್ತೆ: 13/ಅ./2025

ಬೈಂದೂರು| ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಸ್ಥಳಕ್ಕೆ ಅಧಿಕಾರಿಗಳ ದಾಳಿ – ಓರ್ವ ಆರೋಪಿಯ ಬಂಧನ, ಸೊತ್ತುಗಳು ವಶಕ್ಕೆ

ಬೈಂದೂರು: ಗೊಳಿಹೋಳೆ ಗ್ರಾಮದ ಬಡ್ತಿ ಎಂಬಲ್ಲಿ ಸರಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಕಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ ಕೆಂಪು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಆರೋಪಿ ಮನೋಜ ಮೊಗವೀರ(43) ಎಂಬಾತನನ್ನು ಬಂಧಿಸಿದ್ದಾರೆ.
ಈ ಬಗ್ಗೆ ವಿಚಾರಿಸಿದಾಗ ಆರೋಪಿ ಸರಕಾರಿ ಜಾಗದಲ್ಲಿ ಪರವಾನಿಗೆ ಇಲ್ಲದೆ ಗಣಿಗಾರಿಕೆ ನಡೆಸುತ್ತಿದ್ದ. ಬಂಧಿತನಿಂದ ಒಂದು ಟಿಲ್ಲರ್, ಕೆಂಪು ಕಲ್ಲು ಮತ್ತಿತರ ಸಾಮಗ್ರಿಗಳನ್ನು ವಶಪಡೆಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ : 177/2025 ಕಲಂ: 303 (2), 62 BNS & 4, 21 MMDR Act 195703 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.