ಡೈಲಿ ವಾರ್ತೆ: 13/ಅ./2025

ಕೊಡಗು| ಅಕ್ರಮವಾಗಿ ಜಾನುವಾರು ಸಾಗಾಟದ ಗೂಡ್ಸ್‌ ವಾಹನ ಪಲ್ಟಿ, ಮೂರು ಗೋವುಗಳಿಗೆ ಗಾಯ

ಮಡಿಕೇರಿ: ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್‌ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ರಸ್ತೆಯಲ್ಲಿನ ಕಾಗಡಿಕಟ್ಟೆ ಬಳಿ ಭಾನುವಾರ ತಡರಾತ್ರಿ ನಡೆದಿದೆ.

ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಅಪಘಾತದಲ್ಲಿ ಮೂರು ಗೋವುಗಳು ಗಾಯಗೊಂಡಿವೆ. ಘಟನೆಯಲ್ಲಿ ಗಾಯಗೊಂಡಿದ್ದ ಇಬ್ಬರು ಆರೋಪಿಗಳನ್ನು ತಡರಾತ್ರಿಯೇ ಇನ್ನೋವಾ ಕಾರಿನಲ್ಲಿ ಆರೋಪಿ ಕಡೆಯವರು ಬೇರೆಡೆಗೆ ಸಾಗಿಸಿದ್ದಾರೆ.

ಅಪಘಾತದ ಬಳಿಕ ಕೊಡಗಿನಲ್ಲಿ ಗೋವುಗಳ ಅಕ್ರಮ ಸಾಗಾಟ ಹಾಗೂ ಗೋಹತ್ಯೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪೊಲೀಸರು ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದಾರೆ.