ಡೈಲಿ ವಾರ್ತೆ: 13/ಅ./2025

ಹಿರಿಯ ರಂಗಕರ್ಮಿ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ನಿಧನ

ಹಿರಿಯ ರಂಗಕರ್ಮಿ ರಾಜು ತಾಳಿಕೋಟೆ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಧಾರವಾಡ ರಂಗಾಯಣ ನಿರ್ದೇಶಕರಾಗಿ ಅವರು ಕಾರ್ಯ ನಿರ್ವಹಿಸುತ್ತಿದ್ದರು. ಹಾಸ್ಯ ನಟನಾಗಿ, ರಂಗಕರ್ಮಿಯಾಗಿ ಅವರು ಗುರುತಿಸಿಕೊಂಡಿದ್ದರು. ಉಡುಪಿಯ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜು ತಾಳಿಕೋಟೆ ಮೃತರಾಗಿದ್ದಾರೆ.

ಭಾನುವಾರದಿಂದ (ಅ.12) ಮೂರು‌ ದಿನ ಶೂಟಿಂಗ್ ಮಾಡಬೇಕಿತ್ತು. ಆದರೆ ಅಷ್ಟರಲ್ಲಿ ಅವರು ನಿಧರಾಗಿದ್ದು, ಚಿತ್ರತಂಡಕ್ಕೆ ದೊಡ್ಡ ಅಘಾತ ಆಗಿದೆ.