ಡೈಲಿ ವಾರ್ತೆ: 14/ಅ./2025

ಕಾರ್ಕಳ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆಗೆ ಶರಣು

ಹೆಬ್ರಿ: ಮಾಜಿ ಶಾಸಕ ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (40) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.

ಸುದೀಪ್ ಅವರು ಹೆಬ್ರಿಯ ನಿವಾಸಿಯಾಗಿದ್ದು, ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಮೃತರು ತಾಯಿ ಪ್ರಕಾಶಿನಿ,ಸಹೋದರ ಪ್ರದೀಪ,ಸಹೋದರಿ ದೀಪಾ,ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸರು ಧಾವಿಸಿ ಪ್ರಕರಣ ದಾಖಲಿಸಿಕೊಂಡು, ಮೃತದೇಹ ಶವಪರೀಕ್ಷೆಗೆ ಕಳುಹಿಸಲಾಗಿದೆ.