ಡೈಲಿ ವಾರ್ತೆ: 14/ಅ./2025

ಬಂಟ್ವಾಳ| ರಸ್ತೆ ಬದಿ ಕಾರು ರಿಪೇರಿ ಮಾಡುತ್ತಿದ್ದ ವೇಳೆ ಮತ್ತೊಂದು ಕಾರು ಡಿಕ್ಕಿ – ಗಂಭೀರ ಗಾಯಗೊಂಡಿದ್ದ ಮೆಕ್ಯಾನಿಕ್ ಸಾವು!

ಬಂಟ್ವಾಳ: ಕಾರಿನ ಇಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಮತ್ತೊಂದು ಕಾರು ಢಿಕ್ಕಿಯಾಗಿ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಗಾಣದಪಡ್ಡುನಲ್ಲಿ ನಡೆದಿದೆ.

ಮೃತಪಟ್ಟ ಮೆಕ್ಯಾನಿಕ್ ಬೋಳಂತೂರು ನಿವಾಸಿ ಜಬ್ಬಾರ್( 33) ಎಂದು ಗುರುತಿಸಲಾಗಿದೆ.

ಜಬ್ಬಾರ್ ಅವರು ಗಾಣದಪಡ್ಡು ಶಿವಗಣೇಶ್ ಬ್ಯಾಟರಿ ಅಂಗಡಿಯಲ್ಲಿ ಕಾರ್ಮಿಕನಾಗಿದ್ದು, ಆಟೋ ಇಲೆಕ್ಟ್ರಿಕಲ್ ಕೆಲಸ ಮಾಡುತ್ತಿದ್ದರು. ಅವರು ಹೆದ್ದಾರಿಯ ಬದಿಯಲ್ಲಿ ಕಾರೊಂದಕ್ಕರ ಹಾರ್ನ್ ಅಳವಡಿಸುತ್ತಿದ್ದರು. ಈ ವೇಳೆ ಬಂಟ್ವಾಳ ಬೈಪಾಸ್ ಕಡೆಯಿಂದ ಬಂದ ಕಾರೊಂದು ಇವರಿಗೆ ಢಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜಬ್ಬಾರ್ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು.

ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.