ಡೈಲಿ ವಾರ್ತೆ: 17/ಅ./2025

ಬ್ರಹ್ಮಾವರ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ – ಇಬ್ಬರು ವಶಕ್ಕೆ

ಬ್ರಹ್ಮಾವರ : ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರಾಡಿ ಗ್ರಾಮದ ಕೂಡ್ಲಿ ಸಮೀಪ ಸರಕಾರಿ ಜಾಗದಲ್ಲಿ ಅಕ್ರಮವಾಗಿ ಕೋಳಿಗಳ ಕಾಲಿಗೆ ಕತ್ತಿ ಕಟ್ಟಿ ಮನೋರಂಜನೆ ಹಾಗೂ ಹಣ ಪಣವಾಗಿ ಕಟ್ಟಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಬ್ರಹ್ಮಾವರ ಠಾಣಾ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಇತರ ಮಂದಿ ಓಡಿ ಹೋಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಬಂಧಿತ ಆರೋಪಿಗಳಾದ ಪ್ರಶಾಂತ್ ಮತ್ತು ರಾಘವೇಂದ್ರ ಇವರಿಂದ ₹2,120 ನಗದು, ಎರಡು ಕೋಳಿಗಳು, ಕೋಳಿಯ ಕಾಲಿಗೆ ಕಟ್ಟಿದ್ದ ಬಾಲ್‌ಗಳು ಹಾಗೂ ನೈಲಾನ್ ಹಗ್ಗಗಳನ್ನು ವಶಪಡಿಸಿಕೊಂಡಿದ್ದಾರೆ.

ಮತ್ತಷ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದು, ಅವರ ಪತ್ತೆಗೆ ತನಿಖೆ ಮುಂದುವರಿದಿದೆ.

ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 211/2025ರಂತೆ KP Act‌ನ 87, 93 ಸೆಕ್ಷನ್‌ಗಳು ಹಾಗೂ Prevention of Cruelty to Animals Act‌ನ ಸೆಕ್ಷನ್ 11 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.