



ಡೈಲಿ ವಾರ್ತೆ: 20/ಅ./2025

ಹೊನ್ನಾವರ| ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸಾವು – ಹೆಸ್ಕಾಂ ವಿರುದ್ಧ ಆಕ್ರೋಶ

ಹೊನ್ನಾವರ: ಮನೆಯ ಮುಂದೆ ತುಂಡಾಗಿ ಬಿದ್ದದ್ದ ವಿದ್ಯುತ್ ತಂತಿ ಸ್ಪರ್ಶಿಸಿ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡ ಗ್ರಾಮದ ವಿನಾಯಕ ಕೇರಿಯಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಸಂತೋಷ ಗೌಡ(50) ಹಾಗೂ ಪತ್ನಿ ಸೀತಾ ಗೌಡ(42) ಎಂದು ಗುರುತಿಸಲಾಗಿದೆ.
ಮನೆಯ ಮುಂಭಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ
ಆಕಸ್ಮಿಕವಾಗಿ ಸಂತೋಷ ಗೌಡರಿಗೆ ಸ್ಪರ್ಶಿಸಿದೆ.
ಪತಿಗೆ ವಿದ್ಯುತ್ ಸ್ಪರ್ಶಿಸಿದನ್ನ ಕಂಡು ಪತ್ನಿಯೂ ಆತನನ್ನ ರಕ್ಷಿಸಲು ಮುಂದಾಗಿದ್ದಳು.
ಇಬ್ಬರಿಗೂ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.
ಮೃತ ದೇಹವನ್ನು ಹೊನ್ನಾವರ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಸ್ಥಳಿಯರು ಆರೋಪ ಮಾಡಿ ಹೊನ್ನಾವರ ತಾಲೂಕು ಆಸ್ಪತ್ರೆ ಮುಂದೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಸಚಿವ ಮಂಕಾಳ ವೈದ್ಯ ಸ್ಥಳಕ್ಕೆ ಭೇಟಿ ನೀಡಿ ಸಾತ್ವಂನ ಹೇಳಿದ್ದು, ಕುಟುಂಬಕ್ಕೆ ಆರ್ಥಿಕ ಸಹಕಾರ ನೀಡಿದರು.
ಈ ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.