



ಡೈಲಿ ವಾರ್ತೆ: 21/ಅ./2025

ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ: ದೇವರ ದರ್ಶನಕ್ಕೆ ಹೋಗಿದ್ದ ಕರ್ನಾಟಕದ ನಾಲ್ವರು ಸ್ನೇಹಿತರು ದುರ್ಮರಣ

ಬೀದರ್: ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೀದರ್ ಮೂಲದ ನಾಲ್ವರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳವಾರ ಮುಂಜಾನೆ
ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಸಂಭವಿಸಿದೆ.

ಮೃತರನ್ನು ಶಿವಕುಮಾರ್, ರತಿಕಾಂತ, ಇನ್ನಿಬ್ಬರ ಹೆಸರು ತಿಳಿದುಬಂದಿಲ್ಲ. ಮೃತರು ಬೀದರ್ ತಾಲೂಕಿನ ಖಾಶೆಂಪೂರ್ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.
ಓರ್ವನಿಗೆ ಗಂಭೀರ ಗಾಯವಾಗಿದ್ದು, ಉಮ್ಮರ್ಗಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೀಪಾವಳಿ ಹಬ್ಬ ಹಿನ್ನೆಲೆ ಹುಲಜಂತಿ ಮಾಳಿಂಗರಾಯ ಸ್ವಾಮೀಜಿ ದರ್ಶನಕ್ಕೆ ಬೀದರ್ ಮೂಲದ ಐವರು ಸ್ನೇಹಿತರು ತೆರಳಿದ್ದರು. ದರ್ಶನ ಮುಗಿಸಿ ಹಿಂದಿರುಗುವಾಗ ಮಹಾರಾಷ್ಟ್ರದ ಉಮ್ಮರ್ಗಾ ಬಳಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಐವರು ಸ್ನೇಹಿತರ ಪೈಕಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನಾ ಸ್ಥಳಕ್ಕೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.