ಡೈಲಿ ವಾರ್ತೆ: 23/ಅ./2025

ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿ ಪದಗ್ರಹಣ ಕಾರ್ಯಕ್ರಮ – ಮುಖ್ಯ ಅತಿಥಿಗಳಾಗಿ ಅತಾವುಲ್ಲಾ ಜೋಕಟ್ಟೆ ಹಾಗೂ ವಿಷ್ಣುಮೂರ್ತಿ ಭಾಗಿ

ಮಂಗಳೂರು: ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ದಿನಾಂಕ 24/10/2025 ರ ಶುಕ್ರವಾರ ಸಮಯ ಸಂಜೆ 4:30 ಕ್ಕೆ ಮಂಗಳೂರಿನ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾಧ್ಯಕ್ಷರಾದ ಇರ್ಫಾನ್ ಕಾನ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ದುಡಿಯುವ ಕೈಗಳಿಗೆ ನ್ಯಾಯ ಎಂಬ ಧ್ಯೇಯ ವಾಕ್ಯದೊಂದಿಗೆ ದುಡಿಯುವ ಕೈಗಳ ಹಕ್ಕುಗಳಿಗಾಗಿ ಅವರ ಸ್ವಾತಂತ್ರ್ಯ ಮತ್ತು ಕ್ಷೇಮಾಭಿವೃದ್ಧಿಗಾಗಿ ಎಲ್ಲಾ ವರ್ಗದ ಕಾರ್ಮಿಕರನ್ನು ಸಂಘಟಿಸಿ ನಿರಂತರವಾಗಿ ಹೋರಾಟಗಳನ್ನು ಮಾಡುತ್ತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತನ್ನ ಅಸ್ತಿತ್ವವನ್ನು ಕಟ್ಟಿಬೆಳೆಸಿದ ಒಂದು ಕಾರ್ಮಿಕ ಸಂಘಟನೆಯಾಗಿದೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಈ ಸಂಘಟನೆಯ ಮಂಗಳೂರು ನಗರ ಜಿಲ್ಲಾ ಸಮಿತಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಎಸ್.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯರಾದ ಅತಾವುಲ್ಲಾ ಜೋಕಟ್ಟೆ ಹಾಗೂ ಆಟೋ ಚಾಲಕರ ಸಂಘ ದ.ಕ ಜಿಲ್ಲಾಧ್ಯಕ್ಷರಾದ ವಿಷ್ಣುಮೂರ್ತಿ
ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಎಸ್.ಡಿ.ಟಿ.ಯು ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಹಿಮಾನ್ ಬೋಳಿಯಾರ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.