ಡೈಲಿ ವಾರ್ತೆ: 24/ಅ./2025

ಹೈದರಾಬಾದ್​ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ಗೆ ಬೆಂಕಿ: 20ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನ

ಕರ್ನೂಲ್​: ಹೈದರಾಬಾದ್​ನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್​ ಬೆಂಕಿಗೆ ಆಹುತಿಯಾಗಿದ್ದು, ಬಸ್​ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ.

ಕರ್ನೂಲ್​ ಉಪನಗರ ಚಿನ್ನಟೇಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಕಾವೇರಿ ಟ್ರಾವೆಲ್ಸ್​ಗೆ ಸೇರಿದ ಬಸ್​ ಬೆಂಕಿಗಾಹುತಿಯಾಗಿದೆ. ಅವಘಡದಲ್ಲಿ ಹಲವಾರು ಮಂದಿ ಜೀವಂತ ಸುಟ್ಟುಹೋಗಿದ್ದಾರೆ.

ಬಸ್​ನಲ್ಲಿ 39 ಪ್ರಯಾಣಿಕರು ಇದ್ದು 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿ, 12 ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ವರದಿಯಾಗಿದೆ.