
ಡೈಲಿ ವಾರ್ತೆ: 27/ಅ./2025
ಶಿವಮೊಗ್ಗ: ಕಾರು ಡಿಕ್ಕಿಯಾಗಿ ರಸ್ತೆಯಲ್ಲಿ ಆಟವಾಡುತ್ತಿದ್ದ 2 ವರ್ಷದ ಮಗು ಸಾವು

ಶಿವಮೊಗ್ಗ: ಕಾರು ಡಿಕ್ಕಿ ಹೊಡೆದು ರಸ್ತೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ವಿರುಪಿನಕೊಪ್ಪದಲ್ಲಿ ನಡೆದಿದೆ.
ಷಣ್ಮುಖ ಎಂಬುವರ ಪುತ್ರ ವಿನಯ್ (2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ಆಟವಾಡುವ ವೇಳೆ ಕೋಟೆಗಂಗೂರು ಕಡೆಯಿಂದ ಸಾಗರ ರಸ್ತೆಯೆಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.
ಕಾರು ಡಿಕ್ಕಿಯಿಂದ ವಿನಯ್ ತಲೆ, ಕೈ ಸೇರಿದಂತೆ ದೇಹದ ವಿವಿಧೆಡೆ ತೀವ್ರ ಸ್ವರೂಪದ ಗಾಯವಾಗಿತ್ತು. ಕೂಡಲೇ ಮಗುವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.