



ಡೈಲಿ ವಾರ್ತೆ: 29/ಅ./2025

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ – ಮೂವರಿಗೆ ಗಾಯ!

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಮೀನು ಸಾಗಾಟದ ಪಿಕಪ್ ವಾಹನ ಪಲ್ಟಿ ಹೊಡೆದು ಮೂವರು ಗಾಯಗೊಂಡ ಘಟನೆ ಜಿಲ್ಲೆಯ ಜಪ್ಪಿನಮೊಗರು ನೇತ್ರಾವತಿ ಸೇತುವೆಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.
ಗಾಯಗೊಂಡವರು ವಾಹನದ ಚಾಲಕ ರತೀಶ್ (38), ವಾಹನದಲ್ಲಿದ್ದ ಶೈಲಜಾ (57) ಮತ್ತು ಶಾರದಾ(60) ಎಂದು ತಿಳಿದು ಬಂದಿದೆ.
ಗಾಯಗೊಂಡವರನ್ನು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಬೆಳಗ್ಗೆ 6 ಗಂಟೆಯ ಹೊತ್ತಿಗೆ ಮೀನು ಸಾಗಾಟದ ಪಿಕಪ್ ಮಂಗಳೂರಿನಿಂದ ಕೇರಳದ ತಲಪಾಡಿ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ ಯಾಗಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.