ಡೈಲಿ ವಾರ್ತೆ: 30/ಅ./2025

ಬಂಟ್ವಾಳ| ನೂತನವಾಗಿ ಅಳವಡಿಸಲಾದ ದಾರಿದೀಪ ಯೋಜನೆ ಉದ್ಘಾಟಿಸಿದ ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಾಜೆಯಿಂದ ಮಾಣಿಗುತ್ತು ಚಾವಡಿಯವರೆಗೆ ನೂತನವಾಗಿ ಅಳವಡಿಸಲಾದ ದಾರಿದೀಪ ಯೋಜನೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಸ್ಥಳೀಯ ಆಡಳಿತದ ಜವಾಬ್ದಾರಿ. ಅದನ್ನು ಪ್ರಾಮಾಣಿಕವಾಗಿ ಮಾಡಿದಾಗ ಜನರ ಪ್ರೀತಿಯನ್ನು ಗಳಿಸಲು ಸಾಧ್ಯ ಎಂದು ಹೇಳಿದರು.

ಮಾಣಿ ಶ್ರೀ ಉಳ್ಳಾಲ್ತಿ ದೈವಸ್ಥಾನದ ಆಡಳಿತ ಮೊಕ್ತೇಸರ ಸಚಿನ್ ರೈ ಮಾಣಿಗುತ್ತು, ಜಿಲ್ಲಾ ಧಾರ್ಮಿಕ ಪರಿಷತ್ತಿನ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷೆ ಸುಜಾತ ಪೂಜಾರಿ, ಮಾಜಿ ಅಧ್ಯಕ್ಷರಾದ ಬಾಲಕೃಷ್ಣ ಆಳ್ವ ಕೊಡಾಜೆ, ಇಬ್ರಾಹಿಂ.ಕೆ. ಮಾಣಿ, ಸದಸ್ಯರಾದ ನಾರಾಯಣ ಶೆಟ್ಟಿ, ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸೀತಾ, ಅನಂತಾಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಅಬ್ಬಾಸ್ ನೇರಳಕಟ್ಟೆ, ಪ್ರಮುಖರಾದ ನಾಗರಾಜ ಪೂಜಾರಿ, ಜಗದೀಶ್ ಜೈನ್, ಗಿರೀಶ್ ಪೂಜಾರಿ, ಮೂಸಾ ಕರೀಂ ಮಾಣಿ ಮತ್ತಿತರರು ಉಪಸ್ಥಿತರಿದ್ದರು.