



ಡೈಲಿ ವಾರ್ತೆ: 30/ಅ./2025

ಜಾವೆಲಿನ್ ಎಸೆತ; ಸುಜ್ಞಾನ ಪಿಯು ಕಾಲೇಜಿನ ಸಮಿತ್ ರಾಜ್ಯಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಂಘ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಸುಜ್ಞಾನ ಪದವಿಪೂರ್ವ ಕಾಲೇಜಿನ ಸಮಿತ್ ಎಚ್. ಎಂ ಜಾವೆಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಮಿತ್ ಎಚ್. ಎಂ ತೀರ್ಥಹಳ್ಳಿಯ ಮಂಜುನಾಥ ಮತ್ತು ಸ್ಮಿತ ದಂಪತಿಯ ಪುತ್ರ.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಪ್ರಾಂಶುಪಾಲರಾದ ರಂಜನ್ ಬಿ.ಶೆಟ್ಟಿ ವಿಜೇತ ವಿದ್ಯಾರ್ಥಿಯನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕಿ ಜಯಲತಾ ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಿದ್ದರು. ಸುಜ್ಞಾನ ಎಜುಕೇಶನಲ್ ಟ್ರಸ್ಟ್ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.