ಡೈಲಿ ವಾರ್ತೆ: 31/ಅ./2025

ಮಂಗಳೂರು: ಪ್ರಚೋದನಕಾರಿ ಪೋಸ್ಟ್ – VHP ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿರುವ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್‌ನ ಶರಣ್ ಪಂಪ್‌ವೆಲ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನ‌ರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಶೇರ್ ಮಾಡಿರುವ ಪೋಸ್ಟ್ ಅನ್ನು ಅವರು ತೆಗೆದು ಹಾಕಿದ್ದಾರೆ. ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಮಾಜದಲ್ಲಿ ದ್ವೇಷ ಭಾವನೆ ಮೂಡಿಸಬಹುದಾದ ಭಾಷಣದ ವಿಡಿಯೊ ತುಣುಕನ್ನು ಶರಣ್ ಫೇಸ್‌ಬುಕ್‌ನಲ್ಲಿ ಶೇರ್ ಮಾಡಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕದ್ರಿ ಠಾಣೆಯ ಎದುರು ವಿಎಚ್‌ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಜಮಾಯಿಸಿದ್ದಾರೆ.