



ಡೈಲಿ ವಾರ್ತೆ: 31/ಅ./2025

ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟ – ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ ರೋನಕ್ ಖಾರ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಛೇರಿ ಮತ್ತು ವಕ್ವಾಡಿ ಸರಕಾರಿ ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟ ಅಕ್ಟೋಬರ್ 30 , 31 ರಂದು ನಡೆಯಿತು. ಈ ಕ್ರೀಡಾಕೂಟದಲ್ಲಿ 17ರ ವಯೋಮಾನದ ಬಾಲಕರ ಚಕ್ರ ಎಸೆತ ಹಾಗೂ ಹ್ಯಾಮರ್ ಎಸೆತದಲ್ಲಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿ ರೋನಕ್ ಖಾರ್ವಿ ದ್ವಿತೀಯ ಸ್ಥಾನ ಗಳಿಸಿ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಈ ವಿದ್ಯಾರ್ಥಿಗೆ ನಮ್ಮ ಶಾಲೆಯ ಮುಖ್ಯೋಪಧ್ಯಾಯಿನಿಯಾದ ಧರ್ಮ ಭಗಿನಿ ವಿಜಯ ಕ್ರಾಸ್ತಾ, ಶಿಕ್ಷಕ ಶಿಕ್ಷಕೇತರ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ.