



ಡೈಲಿ ವಾರ್ತೆ: 01/NOV/2025

ಪುತ್ತೂರು: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ – ಪ್ರಯಾಣಿಕರು ಗಂಭೀರ ಗಾಯ!

ಪುತ್ತೂರು: ಕಾರು ಮತ್ತು ರಿಕ್ಷಾದ ನಡುವೆ ನಡೆದ ಭೀಕರ ಅಪಘಾತದಲ್ಲಿ ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬೋಡ್ ಹಾಲ್ ಬಳಿ ನಡೆದಿದೆ.
ಅಪಘಾತದ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ.
ಘಟನೆಯಿಂದ ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.