ಡೈಲಿ ವಾರ್ತೆ: 01/NOV/2025

ಹೊನ್ನಾವರ| ಬಸ್ ಕಾರ್ ನಡುವೆ ಅಪಘಾತ: ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ಸಾವು, ಹಲವರಿಗೆ ಗಂಭೀರ ಗಾಯ

ಹೊನ್ನಾವರ: ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ ಬಸ್ ರಸ್ತೆ ಬದಿ ಕಂದಕಕ್ಕೆ ಉರುಳಿ ಓರ್ವ ಪ್ರಯಾಣಿಕ ಸಾವನ್ನಪ್ಪಿ ಹಲವರು ಗಂಭೀರ ಗಾಯ ಗೊಂಡು ಘಟನೆ ಹೊನ್ನಾವರ – ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ಹೊನ್ನಾವರದ ಸೂಳೆಮುರ್ಕಿ ಕ್ರಾಸ್ ನಲ್ಲಿ ಸಂಭವಿಸಿದೆ.

ಬೆಂಗಳೂರು ಕಡೆಯಿಂದ ಭಟ್ಕಳ ಗೇರುಸೊಪ್ಪ ಮಾರ್ಗವಾಗಿ ಬರುತ್ತಿದ್ದ ಬಸ್ ಹೊನ್ನಾವರ ಕಡೆಯಿಂದ ಶಿವಮೊಗ್ಗ ಕಡೆಗೆ ಚಲಿಸುತ್ತಿದ್ದ ಕಾರು ನಡುವೆ ರಸ್ತೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬಸ್ ನಲ್ಲಿದ್ದ 30 ಪ್ರಯಾಣಿಕರ ಪೈಕಿ ಓರ್ವ ಮೃತಪಟ್ಟು ಹತ್ತು ಜನ ಪ್ರಯಾಣಿಕರಿಗೆ ತೀವ್ರಗಾಯಗಳಾಗಿವೆ ಎನ್ನಲಾಗಿದೆ. ಕಾರ್ ನಲ್ಲಿದ್ದವರು ಸಹ ಗಾಯಗೊಂಡಿದ್ದಾರೆ.

ಗಾಯಳುಗಳನ್ನು ತಕ್ಷಣ ಆಂಬುಲೆನ್ಸ್ ಮೂಲಕ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.‌