ಡೈಲಿ ವಾರ್ತೆ: 04/NOV/2025

ನ. 5 ರಂದು ಉಡುಪಿ ಜಿಲ್ಲಾ ವಕ್ಫ್ ಉಮೀದ್ ಪೋರ್ಟಲ್ ಮಾಹಿತಿ ಕಾರ್ಯಾಗಾರ

ಉಡುಪಿ: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಆದೇಶದಂತೆ ವಕ್ಫ್ ಆಸ್ತಿಗೆ ಸಂಬಂಧಿಸಿದ ಉಡುಪಿ ಜಿಲ್ಲಾ ವಕ್ಫ್ ಸಂಸ್ಥೆ ಹಾಗೂ ಆಸ್ತಿ ವಿವರಗಳನ್ನು ಉಮೀದ್ ಈ ಪೋರ್ಟಲ್‌ನಲ್ಲಿ ದಾಖಲೆಗಳನ್ನು ನೋಂದಣಿ ಮಾಡುವ ಬಗ್ಗೆ ಮಾಹಿತಿ ಕಾರ್ಯಾಗಾರ ನ.5 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ಜಿಲ್ಲೆಯ ಮಲ್ಪೆ ಜಾಮಿಯಾ ಮಸೀದಿಯಲ್ಲಿ ನಡೆಯಲಿದೆ.

ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯ ವಕ್ಫ್ ಮಂಡಳಿ ಸ್ಥಾಯಿ ಸಮಿತಿ ಚೇರ್‌ಮೆನ್ ಅನ್ವ‌ರ್ ಪಾಷಾ, ರಾಜ್ಯ ಔಕಫ್ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯರಾದ ಖಾಲಿದ್ ಅಹ್ಮದ್ ಸಾಹೇಬ್ ಹಾಗೂ ರಾಜ್ಯ ಔಕಫ್ ಮಂಡಳಿಯ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ರಿಯಾಝ್ ಖಾನ್ ಭಾಗವಹಿಸಲಿದ್ದಾರೆ.

ಈ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ವಕ್ಸ್ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಮುತವಲ್ಲಿಗಳು, ಆಡಳಿತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮಾಹಿತಿಯನ್ನು ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ನಿಕಟ ಪೂರ್ವ ಅಧ್ಯಕ್ಷರಾದ ಸಿ.ಎಚ್ ಅಬ್ದುಲ್ ಮುತ್ತಾಲಿ, ವಂಡ್ಸೆರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.