
ಡೈಲಿ ವಾರ್ತೆ: 06/NOV/2025
ಕುಂದಾಪುರ| ಬೀದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಪೌರಾಡಳಿತ ಸಚಿವರಿಗೆ ಮನವಿ ಸಲ್ಲಿಸಿದ ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ

ಕುಂದಾಪುರ: ಕುಂದಾಪುರದ ಬೀದಿ ವ್ಯಾಪಾರಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆಯವರು ಪೌರಾಡಳಿತ ಸಚಿವ ರಹಿಂ ಖಾನ್ ರವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ
ಬೀದಿ ವ್ಯಾಪಾರಿಗಳು ಜೀವನೋಪಾಯ ಕಳೆದುಕೊಳ್ಳದಂತೆ ಅವರಿಗೆ ಬದಲಿ ವ್ಯವಸ್ಥೆ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದರು.

ಕಾಂಗ್ರೆಸ್ ನಾಯಕ ಮೊಳಹಳ್ಳಿ ದಿನೇಶ್ ಹೆಗ್ಡೆ ಮನವಿ ಆಲಿಸಿದ ಪೌರಾಡಳಿತ ಸಚಿವ ರಹಿಂ ಖಾನ್ ಕುಂದಾಪುರ ಪುರಸಭಾ ಮುಖ್ಯಾಧಿಕಾರಿ ಆನಂದ ಜೆ ಇವರಿಗೆ ದೂರವಾಣಿ ಕರೆ ಮಾಡಿ ಬೀದಿ ವ್ಯಾಪಾರಿಗಳಿಗೆ ಸಮಸ್ಯೆಯನ್ನು ಅತಿ ಶೀಘ್ರದಲ್ಲಿ ಬಗೆಹರಿಸುವಂತೆ ಹಾಗೂ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿ ಕೊಡುವಂತೆ ಖಡಕ್ ಎಚ್ಚರಿಕೆ ನೀಡಿದರು.