ಡೈಲಿ ವಾರ್ತೆ: 07/NOV/2025

ಉಪ್ಪಿನಂಗಡಿ: ವಿದ್ಯಾರ್ಥಿಗಳ ಮೇಲೆ ನೈತಿಕ ಪೊಲೀಸ್‌ ಗಿರಿ – ಇಬ್ಬರ ಬಂಧನ

ಉಪ್ಪಿನಂಗಡಿ: ಅನ್ಯ ಕೋಮಿನ ವಿದ್ಯಾರ್ಥಿನಿಯರ ಜೊತೆ
ಪೆರಿಯಡ್ಕ ಬಳಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿ ಗಳನ್ನು ತಡೆದು ಬೆದರಿಸಿ ಹಲ್ಲೆ ನಡೆಸಿದ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಹಪಾಠಿ ವಿದ್ಯಾರ್ಥಿಯೊಬ್ಬ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿ ಇದ್ದ ಸಂದರ್ಭ ಆತನನ್ನು ನೋಡಲು ಸಹಪಾಠಿ ವಿದ್ಯಾರ್ಥಿಗಳು ಅನ್ಯ ಕೋಮಿನ ವಿದ್ಯಾರ್ಥಿನಿಯರ ಒಡಗೂಡಿ 9 ಮಂದಿ ಪೆರಿಯಡ್ಕ ಬಳಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಮುಸ್ತಫಾ ಮತ್ತು ಮುಸ್ತಫಾ ಫೆರಿಯಡ್ಕ ಬೆದರಿಸಿ ಹಲ್ಲೆ ನಡೆಸಿದ್ದಾರೆ.

ನ. 06 ರಂದು ಬೆಳಿಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಬೈಕ್ ನಲ್ಲಿ ಬಂದ ಆರೋಪಿಗಳಾದ ಮುಸ್ತಾಫ ಮತ್ತು ಸಹಸವಾರ ಮುಸ್ತಾಫ ಪೆರಿಯಡ್ಕ ಎಂಬವರು ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ, ವಿಭಿನ್ನ ಕೋಮುಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು, ಕೋಮುದ್ವೇಷದಿಂದ ಅವಾಚ್ಯವಾಗಿ ಬೈದು, ಒಬ್ಬ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದಾರೆ.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು ತನಿಖೆ ಮುಂದುವರಿದಿದೆ.