
ಡೈಲಿ ವಾರ್ತೆ: 07/NOV/2025
ಕಡಬ: ಶಾಲಾ ಬಾಲಕ ನೇಣು ಬಿಗಿದು ಆತ್ಮಹತ್ಯೆ

ಕಡಬ: ಶಾಲಾ ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ನೂಜಿಬಾಳ್ತಿಲ ಗ್ರಾಮದಲ್ಲಿ ನ.6 ರಂದು ನಡೆದಿದೆ.ನೂಜಿಬಾಳ್ತಿಲ ಗ್ರಾಮದ ಖಂಡಿಗದ ಲೋಕೇಶ್ ಎಂಬವರ ಪುತ್ರ ಗಗನ್(14) ಆತ್ಮಹತ್ಯೆ ಮಾಡಿಕೊಂಡ ಬಾಲಕ.
ಒಂಭತ್ತನೆ ತರಗತಿಯಲ್ಲಿ ಓದುತ್ತಿದ್ದ ಬಾಲಕ ಗುರುವಾರ ದಿನ ಎಂದಿನಂತೆ ಶಾಲೆಗೆ ತೆರಳಿದ್ದ ಸಂಜೆ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.