



ಡೈಲಿ ವಾರ್ತೆ: 10/NOV/2025

ದಿಲ್ಲಿ ಕೆಂಪುಕೋಟೆ ಬಳಿ ಕಾರು ಸ್ಫೋಟ: ಕನಿಷ್ಠ 9 ಜನ ಸಾವು, ಎಲ್ಲೆಡೆ ಹೈಅಲರ್ಟ್

ನವದೆಹಲಿ: ನವದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ.
ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದೀಗ ಬಂದ ಮಾಹಿತಿ ಪ್ರಕಾರ ದುರಂತದಲ್ಲಿ 9 ಜನ ಸಾವನ್ನಪ್ಪಿದ್ದು, ಸ್ಫೋಟದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ಸಂಬಂಧ ದೆಹಲಿ ಮಾತ್ರವಲ್ಲದೇ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.