ಡೈಲಿ ವಾರ್ತೆ: 14/NOV/2025

ಪುಲ್ವಾಮಾದ ಶಂಕಿತ ಆರೋಪಿ ಡಾ. ಉಮರ್ ನಬಿ ಮನೆ ಧ್ವಂಸ

ಶ್ರೀನಗರ: ದೆಹಲಿಯ ಕೆಂಪು ಕೋಟೆ ಸಮೀಪದಲ್ಲಿ ಪ್ರಬಲ ಕಾರು ಸ್ಫೋಟದ ಶಂಕಿತ ಆರೋಪಿ ಡಾ. ಉಮರ್ ನಬಿ ಅವರ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಧ್ವಂಸಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಶುಕ್ರವಾರ) ತಿಳಿಸಿದ್ದಾರೆ.

ಕೆಂಪುಕೋಟೆ ಬಳಿ ಪ್ರಬಲವಾಗಿ ಸ್ಫೋಟಗೊಂಡ ಕಾರನ್ನು ಚಲಾಯಿಸುತ್ತಿದ್ದು ಉಮರ್ ನಬಿ ಎನ್ನುವುದು ತನಿಖೆಯಲ್ಲಿ ದೃಢಪಟ್ಟಿದೆ. ಹುಂಡೈ ಐ20 ಕಾರಿನಲ್ಲಿ ದೊರೆತ ದೇಹದ ಭಾಗಗಳನ್ನು ಉಮರ್ ತಾಯಿಯ ಡಿಎನ್‌ಎ ಜತೆ ಪರೀಕ್ಷಿಸಿದ ಬಳಿಕ ಅದು ಸ್ಪಷ್ಟವಾಗಿದೆ.

ಸ್ಫೋಟದ ವೇಳೆ ಕಾರಿನಲ್ಲಿ ಉಮ‌ರ್ ಒಬ್ಬನೇ ಇದ್ದ ಎಂಬುದನ್ನೂ ತನಿಖಾಧಿಕಾರಿಗಳು ದೃಢಪಡಿಸಿದ್ದಾರೆ.

ನ.10ರಂದು ಕೆಂಪು ಕೋಟೆ ಸಮೀಪದಲ್ಲಿ ಸಂಭವಿಸಿದ್ದ ಕಾರು ಸ್ಫೋಟದಲ್ಲಿ 13 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.