



ಡೈಲಿ ವಾರ್ತೆ: 14/NOV/2025

ಸಾಲು ಮರದ ತಿಮ್ಮಕ್ಕ ನಿಧನ ಹಿನ್ನೆಲೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸರ್ಕಾರ ಸ್ಪಷ್ಟನೆ

ಬೆಂಗಳೂರು: ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ರಾಜ್ಯದ ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ ಎನ್ನುವ ತಪ್ಪು ಮಾಹಿತಿಯ ಆದೇಶ ಹರಿದಾಡುತ್ತಿದೆ
ಈ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಿದ್ದು, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನ ಆದೇಶವನ್ನು ತಿರುಚಲಾಗಿದ್ದು, ಹರಿದಾಡುತ್ತಿರುವ ಆದೇಶಕ್ಕೆ ಸಹಿ ಮಾಡಿರುವ ಅಧಿಕಾರಿ ಸದ್ಯ ಆ ಇಲಾಖೆಯಲ್ಲಿ ಅವರು ಸೇವೆ ಸಲ್ಲಿಸುತ್ತಿಲ್ಲ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ.
“ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎನ್ನುವುದು ಸುಳ್ಳು. ಸಾಮಾಜಿಕ ಜಾಲ ತಾಣದಲ್ಲಿ ಈ ಬಗ್ಗೆ ಹರಿದಾಡುತ್ತಿರುವ ಪತ್ರ ನಕಲಿಯದ್ದಾಗಿದೆ” ಎಂದು ಸಿಎಂ ಮಾಧ್ಯಮ ಕಚೇರಿ ತಿಳಿಸಿದೆ.