
ಡೈಲಿ ವಾರ್ತೆ: 15/NOV/2025
ಬಿ.ಸಿ. ರೋಡ್| ಇನ್ನೋವಾ ಕಾರು ಮುಖ್ಯ ವೃತ್ತಕ್ಕೆ ಢಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಐವರಿಗೆ ಗಾಯ

ಬಂಟ್ವಾಳ : ಇನೋವಾ ಕಾರೊಂದು ಬಿ.ಸಿ.ರೋಡ್ ಮುಖ್ಯ ವೃತ್ತಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಾರು ಶನಿವಾರ ಮುಂಜಾನೆ 5ರ ವೇಳೆಗೆ ಬಿ.ಸಿ.ರೋಡಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು , ಇಬ್ಬರು ಸ್ಥಳದಲ್ಲೇ ಮೃತಪಟ್ಟು ಐವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಕಾರು ಸಂಪೂರ್ಣ ಜಖಂಗೊಂಡಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಬೆಂಗಳೂರು ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ, ರಸ್ತೆಯಲ್ಲಿದ್ದ ವಾಹನವನ್ನು ತೆರವುಗೊಳಿಸಿದ್ದಾರೆ.