ಡೈಲಿ ವಾರ್ತೆ: 17/NOV/2025

ಸೌದಿ ಅರೇಬಿಯಾದಲ್ಲಿ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ: 42 ಭಾರತೀಯ ಉಮ್ರಾ ಯಾತ್ರಿಕರು ಸಾವು

ಮದೀನಾ ಬಳಿ ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿಯಾಗಿ ಹೈದರಾಬಾದ್ ಮೂಲದ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ.

ಸೋಮವಾರ ಬೆಳಗಿನ ಜಾವ ಮೆಕ್ಕಾದಿಂದ ಮದೀನಾಗೆ ಭಕ್ತರನ್ನು ಕರೆದೊಯ್ಯುತ್ತಿದ್ದ ಪ್ರಯಾಣಿಕರ ಬಸ್ ಡೀಸೆಲ್ ಟ್ಯಾಂಕ್ ಟ್ಯಾಂಕರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 42 ಭಾರತೀಯ ಉಮ್ರಾ ಯಾತ್ರಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೆಕ್ಕಾದಲ್ಲಿ ತಮ್ಮ ಧಾರ್ಮಿಕ ವಿಧಿಗಳನ್ನು ಮುಗಿಸಿದ ನಂತರ ಹೈದರಾಬಾದ್ ಯಾತ್ರಿಕರು ಮದೀನಾಕ್ಕೆ ತೆರಳುತ್ತಿದ್ದರು. ಡಿಕ್ಕಿ ಸಂಭವಿಸಿದಾಗ ಅನೇಕ ಪ್ರಯಾಣಿಕರು ನಿದ್ರಿಸುತ್ತಿದ್ದರು ಎಂದು ವರದಿಯಾಗಿದೆ.