ಡೈಲಿ ವಾರ್ತೆ: 17/NOV/2025

ಸಿಎಂ ಸಿದ್ದರಾಮಯ್ಯರವರ ಪತ್ನಿಯ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇಂದು ಸಂಜೆ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ, ತಜ್ಞ ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ ಎಂದು ತಿಳಿದುಬಂದಿದೆ.