
ಡೈಲಿ ವಾರ್ತೆ: 18/NOV/2025
National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿ ಪಡೆದುಕೊಂಡ ಉಡುಪಿಯ ಸಚಿತ ರಾವ್

ಉಡುಪಿ : ಉಡುಪಿಯ ಪುಟಾಣಿ ಪ್ರತಿಭೆಯಾದ ಸಚಿತ ರಾವ್ ಅವರು ಇತ್ತೀಚೆಗೆ ನಡೆದ ಎರಡು ಪ್ರಮುಖ ಸೌಂದರ್ಯ ಸ್ಪರ್ಧೆಗಳಲ್ಲಿ ವಿಶಿಷ್ಟ ಸಾಧನೆ ಮಾಡಿದ್ದಾರೆ
ನವೆಂಬರ್ 15 ರಂದು ಬೆಂಗಳೂರಿನ ಆರ್.ಆರ್. ನಗರದಲ್ಲಿ ನಡೆದ National Level Beauty Pageant ನ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ವಿನ್ನರ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ನವೆಂಬರ್ 16 ರಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು 2025 ಬ್ಯೂಟಿ ಕಾಂಟೆಸ್ಟ್‌ನಲ್ಲಿ ಮೊದಲ ರನ್ನರ್ ಅಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಉಡುಪಿಯ ಪುತ್ತೂರು ನಿವಾಸಿಗಳಾದ ಸಚಿನ್ ರಾವ್ ಹಾಗೂ ಅಶ್ವಿನಿ ರಾವ್ ಅವರ ಪುತ್ರಿಯಾದ ಸಚಿತ ರಾವ್ ಅವರು, ಉಡುಪಿಯ ಸಿಲಸ್ ಇಂಟರ್‌ನ್ಯಾಷನಲ್ ಶಾಲೆಯ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಉಡುಪಿಯ ಟಾಪ್ ಮಾಡೆಲ್ ಆಗಿರುವ ಸ್ಪೂರ್ತಿ ಶೆಟ್ಟಿ ಅವರಿಂದ ತರಬೇತಿಯನ್ನು ಪಡೆಯುತ್ತಿದ್ದಾರೆ.
ಈ ಬ್ಯೂಟಿ ಕಾಂಟೆಸ್ಟ್‌ನ ಕಾರ್ಯಕ್ರಮದಲ್ಲಿ ಡೆಸ್ಟಿಂಗ್ ವಿಭಾಗದಲ್ಲಿ ಉಡುಪಿಯ ಗೀತಾಂಜಲಿ ಹಾಗೂ ಉಡುಪಿಯ ಖ್ಯಾತ ಮೇಕಪ್ ಆರ್ಟಿಸ್ಟ್ ನಾಗಶ್ರೀ ಆರ್ ಆಚಾರ್ಯ ಅವರು ಸಹಕಾರವನ್ನು ನೀಡಿದ್ದಾರೆ.