ಡೈಲಿ ವಾರ್ತೆ: 24/NOV/2025

ಕೋಟ ಬ್ಲಾಕ್ ಕಾಂಗ್ರೇಸ್ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷರಾಗಿ ಮುಹಮ್ಮದ್ ಯಾಸೀನ್ ಆಯ್ಕೆ

ಕೋಟ: ಕಾಂಗ್ರೆಸ್ ಪಕ್ಷದ ನಾಯಕರಾದ ಶ್ರೀ ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಕೋಟ ಬ್ಲಾಕ್ ಅಧ್ಯಕ್ಷರಾದ ಶಂಕರ್ ಕುಂದರ್‌ರವರ ಶಿಫಾರಿಸ್ಸಿನಂತೆ, ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಜನಾಬ್ ಅಬ್ದುಲ್ ಜಬ್ಬಾರ್ ಸಾಹೇಬರ ಆದೇಶದಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರು ಪಾರಂಪಳ್ಳಿಯ ಮುಹಮ್ಮದ್ ಯಾಸೀನ್ ಅವರನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಟ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉಪಾಧ್ಯಕ್ಷರನ್ನಾಗಿ ನೇಮಕಾತಿ ಮಾಡಲಾಗಿದೆ.