ಡೈಲಿ ವಾರ್ತೆ: 24/NOV/2025

ಗಂಗೊಳ್ಳಿ: ಕೋಳಿ ಅಂಕಕ್ಕೆ ಪೊಲೀಸ್ ದಾಳಿ – 5 ಮಂದಿಯ ಬಂಧನ

ಗಂಗೊಳ್ಳಿ: ಉಡುಪಿ ಜಿಲ್ಲೆಯ ಗಂಗೊಳ್ಳಿ ಸಮೀಪ ಸಾರ್ವಜನಿಕ ಸ್ಥಳದಲ್ಲಿ ಕೋಳಿ‌ ಅಂಕ‌ ಜುಗಾರಿ ಆಟ ಆಡುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ‌ ನಡೆಸಿ 5 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರು ದಿವಕರ (56), ಗಣೇಶ್‌ (40), ಗಣೇಶ್‌ (29), ಪ್ರಶಾಂತ್‌ (37), ಎಚ್‌. ಬಾಬು (55) ಎಂದು ಗುರುತಿಸಲಾಗಿದೆ.

ಪ್ರಕರಣ ಸಾರಾಂಶ : ದಿನಾಂಕ 23/11/2025 ರಂದು ಪವನ್‌ ನಾಯಕ್, ಪೊಲೀಸ್‌ ಉಪನಿರೀಕ್ಷಕರು (ಕಾ&ಸು), ಗಂಗೊಳ್ಳಿ ಪೊಲೀಸ್‌ ಠಾಣೆ ಇವರಿಗೆ ಆಲೂರು ಗ್ರಾಮದ ಆಲೂರು ಮಾವಿನಗುಳಿ ಕಡೆಗೆ ಹೋಗುವ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ಆಡುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ ಸ್ಥಳವನ್ನು ತಲುಪಿ ನೋಡಿದಾಗ ಜನರು ಗುಂಪು ಸೇರಿದ್ದು ಇಬ್ಬರು 2 ಕೋಳಿ ಹುಂಜಗಳ ಕಾಲಿಗೆ ಕೋಳಿ ಬಾಳ (ಕತ್ತಿ) ನ್ನು ಕಟ್ಟಿ ಜೂಜಾಟಕ್ಕೆ ಬಿಟ್ಟಿದ್ದು ಉಳಿದವರು ಸುತ್ತುವರಿದು ತಮ್ಮ ಕೋಳಿಗಳನ್ನು ಕೈ ನಲ್ಲಿ ಹಿಡಿದುಕೊಂಡು ಕಾದಾಟಕ್ಕೆ ಬಿಟ್ಟಿದ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಕೋಳಿ ಅಂಕ ಜುಗಾರಿ ಆಟ ನಡೆಸುತ್ತಿದ್ದವರ ಮೇಲೆ ದಾಳಿ ಮಾಡಿ 1)ದಿವಕರ (56), 2) ಗಣೇಶ್‌ (40), 3) ಗಣೇಶ್‌ (29), 4)ಪ್ರಶಾಂತ್‌ (37),5) ಎಚ್‌. ಬಾಬು (55) ಇವರನ್ನು ವಶಕ್ಕೆ ಪಡೆದುಕೊಂಡಿದ್ದು, ಜಯಶೀಲ ಶೆಟ್ಟಿ ಹಾಗೂ ಇತರರು ಸ್ಥಳದಿಂದ ಓಡಿ ಹೋಗಿರುತ್ತಾರೆ. ಕೋಳಿ ಜುಗಾರಿ ಆಟಕ್ಕೆ ಬಳಸಿದ ಕೋಳಿ ಹುಂಜ – 7 ,ಕತ್ತಿ – 05 (ಕೋಳಿಬಾಳು) ಹಾಗೂ ಕೋಳಿಯ ಕಾಲಿಗೆ ಕೋಳಿ ಬಾಳನ್ನು ಕಟ್ಟಲು ಉಪಯೋಗಿಸಿದ ಹಗ್ಗ – 5 ಹಾಗೂ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿದ್ದು ನಗದು ಹಣ 2400/- ರೂಪಾಯಿ ವಶಪಡಿಸಿಕೊಂಡಿದ್ದು ಆಪಾದಿತರು ಬಂದ 1)KA-25-L-7198, 2)KA-20-EG-2233, 3)KA-20-EG-8400, 4)KA-51-EJ-2633, 5)KA-19-EV-7731 ನೇ ಪಲ್ಸರ್‌ ಮೋಟಾರು ಸೈಕಲ್‌, 6)KA-20-EB-2320, 7) KA-20-HD-2786 ನೇ ಮೋಟಾರು ಸೈಕಲನ್ನು ಸ್ವಾಧೀನಪಡಿಸಿಕೊಂಡಿದ್ದು, ಆರೋಪಿತರು ಕೋಳಿಗಳಿಗೆ ಆಹಾರ ನೀರು ಕೊಡದೇ ಕಾಲಿಗೆ ಕತ್ತಿಕಟ್ಟಿ ಹಿಂಸೆ ನೀಡಿ ಕೋಳಿಗಳ ಮೇಲೆ ಹಣವನ್ನು ಪಣವಾಗಿ ಕಟ್ಟಿ ಸಾರ್ವಜನಿಕ ಸ್ಥಳದಲ್ಲಿ ಕೋಳಿ ಅಂಕ ಜುಗಾರಿ ಆಟ ನಡೆಸಿರುವುದಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 112/2025 ಕಲಂ:11(1)(a) ಪ್ರಾಣಿ ಹಿಂಸೆ ತಡೆ ಕಾಯ್ದೆ ಮತ್ತು 87,93 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.