

ಡೈಲಿ ವಾರ್ತೆ: 28/NOV/2025


ಚಕ್ರ ಎಸೆತ – ರೋನಕ್ ಆರ್ ಖಾರ್ವಿ ರಾಜ್ಯಮಟ್ಟಕ್ಕೆ

ಗಂಗೊಳ್ಳಿ: ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜನತಾ ಪ್ರೌಢಶಾಲೆ ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟ 2025ರ ಚಕ್ರ ಎಸೆತ ಸ್ಪರ್ಧೆಯ 17ರ ವಯೋಮಾನದ ಬಾಲಕರ ವಿಭಾಗದಲ್ಲಿ ಸ್ಟೆಲ್ಲಾ ಮಾರಿಸ್ ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿಯ 9ನೇ ತರಗತಿಯ ವಿದ್ಯಾರ್ಥಿ ರೋನಕ್ ಆರ್ ಖಾರ್ವಿ ದ್ವಿತೀಯ ಸ್ಥಾನ ಗಳಿಸಿ ಬೆಂಗಳೂರುನಲ್ಲಿ ನಡೆಯುವ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರಿಗೆ ನಮ್ಮ ಶಾಲೆಯ ಮುಖ್ಯ ಶಿಕ್ಷಕಿಯಾದ ಭಗಿನಿ ವಿಜಯ ಕ್ರಾಸ್ತಾ , ಶಿಕ್ಷಕ ಶಿಕ್ಷಕೇತರ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.
ಇವರಿಗೆ ನಮ್ಮ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ ಕುಮಾರ್ ಶೆಟ್ಟಿ ಮಾರ್ಗದರ್ಶನ ನೀಡಿದ್ದಾರೆ.