
ಡೈಲಿ ವಾರ್ತೆ: 01/DEC/2025
ಕೆಪಿಸಿಸಿ ಮೀನುಗಾರ ವಿಭಾಗದ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅಭಿನಂದಿಸಿದ ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ

ಬೆಂಗಳೂರು : ಕೆಪಿಸಿಸಿ ಮೀನುಗಾರ ವಿಭಾಗದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಅವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಹನೀಫ್ ಬಗ್ಗುಮೂಲೆ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ, ಸಾಮಾಜಿಕ ಕಾರ್ಯಕರ್ತ ಸಿದ್ದೀಕ್ ಸೂರ್ಯ ಅವರು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮೀನುಗಾರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಅವರು ಉಪಸ್ಥಿತರಿದ್ದರು.