ಡೈಲಿ ವಾರ್ತೆ: 02/DEC/2025

ನೆಟ್ ಬಾಲ್ ಪಂದ್ಯಾಟ – ಸ್ಟೆಲ್ಲಾ ಮಾರಿಸ್ ಶಿಕ್ಷಣ ಸಂಸ್ಥೆಯ 20 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಗಂಗೊಳ್ಳಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ/ ಉಪನಿರ್ದೇಶಕರ ಕಛೇರಿ ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೈಂದೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಕೊಲ್ಲೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಹಾಗೂ ಬಾಲಕಿಯರ ನೆಟ್ ಬಾಲ್ ಪಂದ್ಯಾಟದಲ್ಲಿ ನಾಲ್ಕು ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ನಾಲ್ಕು ಟ್ರೋಫಿಯನ್ನು ಗಳಿಸಿರುತ್ತಾರೆ ಹಾಗೂ ಭಾಗವಹಿಸಿದ 43 ವಿದ್ಯಾರ್ಥಿಗಳ ಪೈಕಿ 20 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಇವರು ಚಾಮರಾಜನಗರದಲ್ಲಿ ನಡೆಯುವ ರಾಜ್ಯಮಟ್ಟದ ಪಂದ್ಯಾಟದಲ್ಲಿ ಭಾಗವಹಿಸುತ್ತಾರೆ.

ಇವರಿಗೆ ನಮ್ಮ ಸಂಸ್ಥೆಯ ಮುಖ್ಯಸ್ಥರಾಗಿರುವ ಭಗಿನಿ ಕ್ರೆಸೆನ್ಸ್ ಹಾಗೂ ವಿಜಯಾ ಕ್ರಾಸ್ತರವರು, ಶಿಕ್ಷಕ ಶಿಕ್ಷಕೇತರ ವೃಂದದವರು ಪೋಷಕರು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿರುತ್ತಾರೆ ಈ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಣಯ ಕುಮಾರ್ ಶೆಟ್ಟಿ ಮಾರ್ಗದರ್ಶನವನ್ನು ನೀಡಿರುತ್ತಾರೆ.