ಡೈಲಿ ವಾರ್ತೆ: 02/DEC/2025

ಇಮ್ರಾನ್ ಖಾನ್ ಜೀವಂತವಾಗಿದ್ದಾರೆ: ಪಾಕ್ ಜೈಲಿನಲ್ಲಿ ಮಾಜಿ ಪ್ರಧಾನಿಯನ್ನು ಭೇಟಿಯಾದ ಅವರ ತಂಗಿ

ನವದೆಹಲಿ: ಪಾಕಿಸ್ತಾನದ ಅಡಿಯಾಲ ಜೈಲಿನಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ವದಂತಿ ಹರಿದಾಡಿತ್ತು. ಈ ಬಗ್ಗೆ ಪಾಕಿಸ್ತಾನದಾದ್ಯಂತ ವ್ಯಾಪಕ ಪ್ರತಿಭಟನೆಗಳು ಉಂಟಾಗಿತ್ತು. ಆದರೆ ಇಮ್ರಾನ್ ಖಾನ್ ಹತ್ಯೆಯ ವಿಷಯವನ್ನು ಪಾಕ್ ತಳ್ಳಿಹಾಕಿತ್ತು. ಕೊನೆಗೂ ಇಂದು ಅವರ ಸಹೋದರಿ ಉಜ್ಮಾ ಅವರಿಗೆ ಇಮ್ರಾನ್ ಖಾನ್ ಭೇಟಿಗೆ ಅವಕಾಶ ನೀಡಲಾಗಿತ್ತು. ಜೈಲಿನಲ್ಲಿ ಇಮ್ರಾನ್ ಖಾನ್ ಅವರನ್ನು ಭೇಟಿಯಾದ ಉಜ್ಮಾ, “ಅಣ್ಣ ಚೆನ್ನಾಗಿದ್ದಾರೆ, ಫಿಟ್ ಆಗಿದ್ದಾರೆ ಮತ್ತು ಜೀವಂತವಾಗಿದ್ದಾರೆ” ಎಂದು ಹೇಳಿದ್ದಾರೆ.

ಅವರು ಚೆನ್ನಾಗಿದ್ದಾರೆ ಆದರೆ ತುಂಬಾ ಕೋಪಗೊಂಡಿದ್ದಾರೆ. ಜೈಲಿನಲ್ಲಿ ಅವರನ್ನು ಮಾನಸಿಕ ಹಿಂಸೆಗೆ ಒಳಪಡಿಸುತ್ತಿದ್ದಾರೆ. ಯಾರೊಂದಿಗೂ ಸಂವಹನ ನಡೆಸಲು ಅವಕಾಶ ನೀಡುತ್ತಿಲ್ಲ ಎಂದು ನನ್ನ ಬಳಿ ಹೇಳಿದರು ಎಂದು ಉಜ್ಮಾ ಹೇಳಿದ್ದಾರೆ.

ಇಮ್ರಾನ್ ಖಾನ್ ಸಾವಿನ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ದೃಢೀಕರಿಸದ ಹೇಳಿಕೆಗಳು ತುಂಬಿ ತುಳುಕುತ್ತಿದ್ದವು. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ, ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಜೊತೆಗೆ ರಾವಲ್ಪಿಂಡಿಯ ಅಡಿಯಾಲ ಜೈಲಿನಲ್ಲಿ ಖಾನ್ ಹತ್ಯೆಗೆ ಸಂಚು ರೂಪಿಸಿದೆ ಎಂದು ಬಲೂಚಿಸ್ತಾನದ ವಿದೇಶಾಂಗ ಸಚಿವಾಲಯ ಆರೋಪಿಸಿದ ನಂತರ ಈ ಊಹಾಪೋಹಗಳು ತೀವ್ರಗೊಂಡಿತ್ತು.