
ಡೈಲಿ ವಾರ್ತೆ: 31/DEC/2025
ಬೈಂದೂರು| ಬೈಕ್ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು, ಸಹ ಸವಾರ ಗಂಭೀರ

ಕುಂದಾಪುರ: ಬೈಕ್ ಮತ್ತು ಟಾಟಾ ಏಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸಹ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿ. 31 ರಂದು ಬುಧವಾರ ರಾಷ್ಟ್ರೀಯ ಹೆದ್ದಾರಿ 66ರ ಖಂಬದಕೋಣೆ ಬಳಿ ಸಂಭವಿಸಿದೆ.
ಮೃತಪಟ್ಟ ಬೈಕ್ ಸವಾರನನ್ನು ಉಪ್ಪುಂದ ಶಾಲೆಬಾಗಿಲು ಸಮೀಪದ ಫಿಶರೀಸ್ ಕಾಲೋನಿ ನಿವಾಸಿ ಪರಮೇಶ್ವರ ಖಾರ್ವಿ ಎಂಬುವರ ಪುತ್ರ ಭುವನ್ (19) ಎಂದು ಗುರುತಿಸಲಾಗಿದೆ. ಸಹಸವಾರ ಉಪ್ಪುಂದ ನಿವಾಸಿ ಗಿರಿಜಾ ಖಾರ್ವಿ ಅವರ ಪುತ್ರ ಮಧು (20) ಗಂಭೀರ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾನೆ.

ಭುವನ್ ಹಾಗೂ ಮಧು ಅವರು ಬೈಕಿನಲ್ಲಿ ಕುಂದಾಪುರ ದಿಂದ ಉಪ್ಪುಂದಕ್ಕೆ ಬರುತ್ತಿದ್ದರು. ಖಂಬದಕೋಣೆಯಲ್ಲಿ ಬರುತ್ತಿದ್ದ ವೇಳೆ ಟಾಟಾ ಏಸ್ ವಾಹನವೊಂದು ಹೆದ್ದಾರಿಯಲ್ಲಿ ಯಾವುದೇ ಸೂಚನೆ ಇಲ್ಲದೆ ಒಮ್ಮೆಲೇ ಯೂ ಟರ್ನ್ ತೆಗೆದುಕೊಂಡಿದ್ದರಿಂದ ಬೈಕ್ ನಿಯಂತ್ರಣ ತಪ್ಪಿ ಟಾಟಾ ಏಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಭುವನ್ ಗೆ ತಲೆಯಲ್ಲಿ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರ ಮಧು ಅವರಿಗೆ ತಲೆ, ಎದೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.