

ಡೈಲಿ ವಾರ್ತೆ:JAN/02/2026
ಉದ್ಯಾವರ| ಸವಾರನ ನಿಯಂತ್ರಣ ತಪ್ಪಿ ಸೇತುವೆಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು

ಕಾಪು, ಜ. 02: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಸುಕಿನ ವೇಳೆ 2:30ರ ಸುಮಾರಿಗೆ ಸಂಭವಿಸಿದೆ.
ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ಬರುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದಿದೆ.
ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಯುವರಾಜ ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು ಮೃತದೇಹವನ್ನು ಉಚ್ಚಿಲದ ಎಸ್‌ಡಿಪಿಐ ಆಂಬುಲೆನ್ಸ್ ನಲ್ಲಿ ಕೆಎಂ ಸಿರಾಜ್, ಜಲಾಲುದ್ದೀನ್ ಅಜ್ಜರಕಾಡು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದರು.