
ಡೈಲಿ ವಾರ್ತೆ:JAN/04/2026
ಶಾಸಕ ಲಕ್ಷ್ಮಣ ಸವದಿ ಪುತ್ರನಿಂದ ಹಲ್ಲೆ ಆರೋಪ: ಡಿಸಿಸಿ ಬ್ಯಾಂಕ್ ನೌಕರರ ಪ್ರತಿಭಟನೆ

ಬೆಳಗಾವಿ, ಜ.04: ಶಾಸಕ ಲಕ್ಷ್ಮಣ ಸವದಿ ಪುತ್ರ ಚಿದಾನಂದ ಸವದಿ ವಿರುದ್ಧ ಡಿಸಿಸಿ ಬ್ಯಾಂಕ್ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಈ ಘಟನೆಯನ್ನು ಖಂಡಿಸಿ, ಸವದಿ ಪುತ್ರನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಡಿಸಿಸಿ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಅಥಣಿ ಪೊಲೀಸ್ ಠಾಣೆ ಎದುರು ಮತ್ತು ಡಿಸಿಸಿ ಬ್ಯಾಂಕ್ ಮುಂಭಾಗ ಎರಡೂ ಕಡೆ ಧರಣಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಜನರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮತ್ತೊಂದೆಡೆ ಶಾಸಕ ಲಕ್ಷ್ಮಣ ಸವದಿ ಅವರ ನಿವಾಸದ ಬಳಿ ಅಭಿಮಾನಿಗಳು ಜಮಾಯಿಸಿದ್ದಾರೆ. ಯಾವುದೇ ದುಡುಕಿನ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಈ ವೇಳೆ ಲಕ್ಷ್ಮಣ ಸವದಿ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ.