ಡೈಲಿ ವಾರ್ತೆ:JAN/04/2026

ಇಂದು ಸಾಸ್ತಾನದಲ್ಲಿ ವಡ್ಡರ್ಸೆ ಪ್ರಶಸ್ತಿ ಪ್ರದಾನ

ಕೋಟ, ಜ.4: ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಹೆಸರಿನಲ್ಲಿ ಕೊಡಮಾಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕಾಗೋಷ್ಠಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜ.4 ರಂದು ಸಾಸ್ತಾನ ಕೋಸ್ಟಲ್ ಪ್ಯಾರಡೈಸ್ ಅನುಗ್ರಹ ಸಭಾಂಗಣದಲ್ಲಿ ಸಂಜೆ 5 ರಿಂದ ಜರಗಲಿದೆ.

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಪ್ರಶಸ್ತಿಗೆ ಭಾಜನರಾಗಲಿದ್ದು ಗಣ್ಯರ ಸಮ್ಮುಖದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.