

ಡೈಲಿ ವಾರ್ತೆ:JAN/07/2026

ಅಂಕೋಲಾ |ಪುರೋಹಿತನನ್ನು ಮದುವೆಯಾಗಲು ಒಪ್ಪದ ಯುವತಿ|ಆತ್ಮಹತ್ಯೆಗೆ ಶರಣಾದ ಯುವಕ

ಅಂಕೋಲಾ, ಜ. 07: ಯಲ್ಲಾಪುರದಲ್ಲಿ ಮದುವೆಗೆ ಒಪ್ಪದ ರಂಜಿತಾಳನ್ನ ಕತ್ತುಕೊಯ್ದು ಹತ್ಯೆ ಮಾಡಿ ತಾನೂ ಆತ್ಮಹತ್ಯೆಮಾಡಿಕೊಂಡ ರಫೀಕ್ ಪ್ರಕರಣ ಮಾಸುವ ಬೆನ್ನಲ್ಲೇ ಅಂಕೋಲದಲ್ಲಿ ಪ್ರೀತಿಸಿದ ಯುವತಿ ವಿವಾಹಕ್ಕೆ ಒಪ್ಪಿಗೆ ನೀಡದ ಹಿನ್ನೆಲೆಯಲ್ಲಿ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಅಂಕೋಲಾ ತಾಲೂಕಿನ ಅಸ್ಲಗದ್ದೆ ಗ್ರಾಮದಲ್ಲಿ ಈ ಘಡನೆ ನಡೆದಿದ್ದು ಆತ್ಮಹತ್ಯೆ ಮಾಡಿಕೊಂಡವನು ಪವನ್ ಭಟ್ (24) ಎಂಬ ಯುವಕನಾಗಿದ್ದಾನೆ.
ಪವನ್ ಭಟ್ ವೃತ್ತಿಯಿಂದ ಪೌರೋಹಿತ್ಯ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಇದೇ ಊರಿನ ಯುವತಿಯೊಂದಿಗೆ ಪ್ರೀತಿಯ ಸಂಬಂಧ ಹೊಂದಿದ್ದನು ಎನ್ನಲಾಗಿದೆ. ಈ ಸಂಬಂಧವನ್ನು ವಿವಾಹವಾಗಿ ಮುಂದುವರಿಸಲು ಯುವಕ ಆಕೆಯ ಮೇಲೆ ಒತ್ತಾಯ ಹಾಕಿದ್ದಾನೆ. ಆದರೆ ಯುವತಿ ವಿವಾಹಕ್ಕೆ ನಿರಾಕರಿಸಿದ್ದಾಳೆ ಎಂದು ತಿಳಿದುಬಂದಿದೆ. ಈ ನಿರಾಕರಣೆಯಿಂದ ಮನನೊಂದ ಪವನ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಘಟನೆ ಕುರಿತು ಮಾಹಿತಿ ಪಡೆದ ಅಂಕೋಲಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.