
ಡೈಲಿ ವಾರ್ತೆ:JAN/07/2026
ಕುಂದಾಪುರ| ಸ್ಕೂಟರ್ ಗೆ ಟಿಪ್ಪರ್ ಲಾರಿ ಡಿಕ್ಕಿ – ಸವಾರ ಸ್ಥಳದಲ್ಲೇ ಸಾವು

ಕುಂದಾಪುರ, ಜ.07: ಮರಳು ತುಂಬಿದ ಟಿಪ್ಪರ್ ಲಾರಿ ಸ್ಕೂಟರ್ ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜ. 7ರಂದು ಬುಧವಾರ ಹಂಗಳೂರು ಯೂನಿಟಿ ಹಾಲ್ ಬಳಿ ಸಂಭವಿಸಿದೆ.
ಮೃತರನ್ನು ಬೀಜಾಡಿ ಕೃಷ್ಣಮೂರ್ತಿ ಅಡಿಗ(55) ಎಂದು ಗುರುತಿಸಲಾಗಿದೆ.
ಕುಂದಾಪುರದಿಂದ ಕೋಟೇಶ್ವರ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಹಿಂದಿನಿಂದ ಬಂದ ಮರಳು ತುಂಬಿದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಕುಂದಾಪುರ ಸಂಚಾರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿ ಕೊಂಡಿದ್ದಾರೆ.