
ಡೈಲಿ ವಾರ್ತೆ:JAN/11/2026
SDPI ಮಂಗಳೂರು (ಉಳ್ಳಾಲ) ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮ:ಎಸ್.ಡಿ.ಪಿ.ಐ ರಾಷ್ಟ್ರೀಯ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಭಾಗಿ.

ಉಳ್ಳಾಲ: ಜ9; ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ( ಉಳ್ಳಾಲ ) ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಪಕ್ಷ ಸಮಾವೇಶ ಕಾರ್ಯಕ್ರಮವು ಶುಕ್ರವಾರದಂದು ತೊಕ್ಕೋಟ್ಟು ಯುನಿಟಿ ಸಭಾಂಗಣದಲ್ಲಿ ಎಸ್.ಡಿ.ಪಿ.ಐ ಮಂಗಳೂರು ವಿಧಾನ ಸಭಾ ಕ್ಷೇತ್ರ ಅಧ್ಯಕ್ಷರಾದ ಝಾಹಿದ್ ಮಲಾರ್ ರವರ ನೇತೃತ್ವದಲ್ಲಿ ನಡೆಯಿತು.
ಪಕ್ಷ ಸಮಾವೇಶಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ SIR ಕುರಿತು ಅದರ ಸಾಧಕ ಮತ್ತು ಬಾಧಕಗಳ ಬಗ್ಗೆ ಬಹಳ ಸ್ಪಷ್ಟವಾಗಿ ವಿವರಿಸಿ ಕಾರ್ಯಕರ್ತರಲ್ಲಿರುವ ಗೊಂದಲವನ್ನು ನಿವಾರಿಸಿದರು.
ಸಮಾವೇಶದಲ್ಲಿ ಎಸ್.ಡಿ.ಪಿ.ಐ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ , ಜಿಲ್ಲಾ ಸಮಿತಿ ಕೋಷಾದಿಕಾರಿ ಯಾಸೀನ್ ಅರ್ಕುಳ ಜಿಲ್ಲಾ ಸಮಿತಿ ಸದಸ್ಯರುಗಳಾದ ಅಕ್ಬರ್ ರಾಝ, ಲತೀಫ್ ಕಲ್ಲಾಪು, ಕ್ಷೇತ್ರ ಸಮಿತಿ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಜೊತೆ ಕಾರ್ಯದರ್ಶಿಗಳಾದ ಆರೀಫ್ ಬೋಳಿಯಾರ್, ಅಶ್ರಫ್ ಮಂಚಿ, ಕ್ಷೇತ್ರ ಸಮಿತಿ ಸದಸ್ಯರಾದ ಬಶೀರ್ ಎಸ್.ಎಂ,
ಜುನೈದ್ RKC , ಹನೀಫ್ ಬೋಳಿಯಾರ್, ಶಹೀದ್ ಕಲ್ಕಟ್ಟ, ವಿಮೆನ್ ಇಂಡಿಯಾ ಮೂವ್ಮೆಂಟ್ ಮಂಗಳೂರು ನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಮೀಮಾ ತುಂಬೆ, WIM ಕ್ಷೇತ್ರ ಅಧ್ಯಕ್ಷೆ ಸಬ್ರೀನಾ ಯು.ಬಿ. , ಜಿಲ್ಲಾ ಸಮಿತಿ ಸದಸ್ಯೆ ಹಾಝರ ಮಲಾರ್ , ಸಜಿಪ ನಡು ಗ್ರಾಮ ಪಂಚಾಯತ್ ಅಧ್ಯಕ್ಷ ಇಕ್ಬಾಲ್ S.N. ಮತ್ತು ಕ್ಷೇತ್ರ ವ್ಯಾಪ್ತಿಯ ಬ್ಲಾಕ್ ಅಧ್ಯಕ್ಷರು, ಕಾರ್ಯದರ್ಶಿಗಳು ಮುಂತಾದವರು ಉಪಸ್ಥಿತರಿದ್ದರು .