

ಡೈಲಿ ವಾರ್ತೆ:JAN/15/2026

ವಿದ್ಯಾರ್ಥಿಯ ಕೊಲೆ ಪ್ರಕರಣ: ಮೂವರು ಅಪ್ರಾಪ್ತರ ಬಂಧನ

ಧಾರವಾಡ, ಜ.15: ಧಾರವಾಡದಲ್ಲಿ ಒಬ್ಬ ಬಾಲಕನ ಭೀಕರವಾದ ಕೊಲೆಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಬಾಲಕನನ್ನು ಕೊಲೆ ಮಾಡಲಾಗಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ಪಟ್ಟಣದಲ್ಲಿ ನಿನ್ನೆ ಸಂಜೆ ಈ ಕೊಲೆ ನಡೆದಿದೆ. ಕೊಲೆಯಾದ ಬಾಲಕ ನಿಂಗರಾಜ್ ಅವರಿ (16) ಎಂದು ತಿಳಿದುಬಂದಿದೆ.
ಕೊಲೆಯಾದ ನಿಂಗರಾಜ್, ಅನುದಾನಿತ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಓದುತ್ತಿದ್ದ. ಕ್ಷುಲ್ಲಕ ವಿಚಾರವಾಗಿ ಜಗಳ ಮಾಡಿಕೊಂಡು ಮೂವರು ಅಪ್ರಾಪ್ತ ಬಾಲಕರು ಸೇರಿ ನಿಂಗರಾಜನನ್ನು ಕೊಲೆ ಮಾಡಿದ್ದಾರೆ. ಸದ್ಯ ಪೊಲೀಸರು ಮೂವರು ಅಪ್ರಾಪ್ತರನ್ನು ಆರೆಸ್ಟ್ ಮಾಡಿದ್ದಾರೆ. ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.