ಡೈಲಿ ವಾರ್ತೆ:JAN/16/2026

ಕಾರ್ಕಳ| ಮನೆಯಲ್ಲಿ ಗ್ಯಾಸ್‌ ಸಿಲಿಂಡ‌ರ್ ಸ್ಫೋಟ – ಲಕ್ಷಾಂತರ ರೂ.ನಷ್ಟ

ಕಾರ್ಕಳ: ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ.
ಘಟನೆಯಲ್ಲಿ ಮನೆಯ ಎಲ್ಲರೂ ಅದೃಷ್ಟವಶಾತ್ ಪಾರಾಗಿದ್ದಾರೆ.

ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಷೀನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.

ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ್ದರಿಂದ ಯಾರಿಗೂ ಹಾನಿಯಾಗಿಲ್ಲ. ಅಲ್ಲದೆ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ.
ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿದ್ದಾಗಿ ತಿಳಿದುಬಂದಿದೆ.