ಡೈಲಿ ವಾರ್ತೆ:JAN/18/2026

ಕೊನೆಗೂ ನಿಜವಾಯ್ತಾ ನಂಬಿಕೆ?: ಲಕ್ಕುಂಡಿಯಲ್ಲಿ ಉತ್ಖನನದ ವೇಳೆ ಬೃಹತ್ ಹಾವು ಪ್ರತ್ಯಕ್ಷ!

ಗದಗ: ಗದಗ ತಾಲೂಕಿನ ಲಕ್ಕುಂಡಿಯಲ್ಲಿ ನಿಧಿ ಪತ್ತೆಯಾದ ಬಳಿಕ ನಡೆಯುತ್ತಿರುವ ಉತ್ಖನನದ ವೇಳೆ ಬೃಹತ್ ಹಾವು ಕಾಣಿಸಿಕೊಂಡಿದೆ. ಕೋಟೆ ವೀರಭದ್ರೇಶ್ವರ ದೇವಸ್ಥಾನ ಬಳಿಯ ಆವರಣದಲ್ಲಿ ಮೂರನೇ ದಿನದ ಉತ್ಖನನ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಹಾವು ಕಾಣಿಸಿಕೊಂಡ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಭಯಭೀತರಾಗಿದ್ದಾರೆ. ಈ ಹಿಂದೆ ಗ್ರಾಮದಲ್ಲಿ ಮಳೆಗಾಲದಲ್ಲಿ ಮಣ್ಣು ಅಗೆಯುವಾಗ ಚಿನ್ನದ ತುಂಡುಗಳು ಕಾಣಿಸುತ್ತಿದ್ದವು. ಆದರೆ, ಈ ನಿಧಿ ಆಸೆಯ ಹಿಂದೆ ಹೋದವರು ರಕ್ತಕಾರಿ ಸತ್ತಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದರು.

ನಿಧಿಯನ್ನು ಸರ್ಪ ಕಾಯುತ್ತೆ ಎಂಬ ನಂಬಿಕೆಗೆ ಈ ಘಟನೆ ಪುಷ್ಟಿ ನೀಡಿದೆ. ಹಾವು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಆದರೆ, ಇತಿಹಾಸ ತಜ್ಞರು ಮಾತ್ರ ಇದು ಕೇವಲ ನಂಬಿಕೆ, ವೈಜ್ಞಾನಿಕವಾಗಿ ಇದಕ್ಕೆ ಆಧಾರವಿಲ್ಲ ಎನ್ನುತ್ತಿದ್ದಾರೆ.