

ಡೈಲಿ ವಾರ್ತೆ:JAN/18/2026

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

ಬೀದರ್: ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ವಾಂಜರಿ ಬಡಾವಣೆಯಲ್ಲಿ ಗಾಳಿಪಟ ಹಿಡಿಯಲು ಹೋಗಿ ಯುವಕನೊಬ್ಬ ಕಟ್ಟಡದ ಮೇಲಿಂದ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೃತನನ್ನು ಶಶಿಕುಮಾರ್ ಶಿವಾನಂದ (19) ಎಂದು ಗುರುತಿಸಲಾಗಿದ್ದು, ಆತ ಖಾಸಗಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಗಾಳಿಪಟ ಹಾರಿಸುವಾಗ ದಾರ ತುಂಡಾಗಿ, ಹಾರಿಹೋಗುತ್ತಿದ್ದ ಗಾಳಿಪಟ ಹಿಡಿಯಲು ಹೋಗಿ ಆಯತಪ್ಪಿ ಕಟ್ಟಡದ ಮೇಲಿಂದ ಬಿದ್ದಿದ್ದಾನೆ. ಈ ಘಟನೆಯ ಕುರಿತು ಹುಮ್ನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.