ಡೈಲಿ ವಾರ್ತೆ:JAN/19/2026

ಕೇರಳದಲ್ಲಿ ಆಘಾತಕಾರಿ ಘಟನೆ: ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಆರೋಪದ ನಂತರ ವ್ಯಕ್ತಿ ಆತ್ಮಹತ್ಯೆ

ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್‌ನಲ್ಲಿ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ಆರೋಪಿಸಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

42 ವರ್ಷದ ದೀಪಕ್ ಯು ಎಂದು ಗುರುತಿಸಲ್ಪಟ್ಟ ಈ ವ್ಯಕ್ತಿ ಕೋಝಿಕ್ಕೋಡ್‌ನ ಗೋವಿಂದಪುರಂ ನಿವಾಸಿ. ಬೆಳಗ್ಗೆ 7 ಗಂಟೆ ಸುಮಾರಿಗೆ ಪೋಷಕರು ಆತನನ್ನು ಎಬ್ಬಿಸಲು ಪ್ರಯತ್ನಿಸಿದಾಗ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಆ ವ್ಯಕ್ತಿ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ. ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ಜನರು ಇದನ್ನು ವೀಕ್ಷಿಸಿದ್ದಾರೆ ಎಂದು ಆತನ ಪೋಷಕರು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರ ಪಡೆಯುವುದಕ್ಕಾಗಿ ಮಹಿಳೆಯು ದೀಪಕ್‌ನ ಸಾವಿಗೆ ಕಾರಣವಾಗಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.