

ಡೈಲಿ ವಾರ್ತೆ:JAN/19/2026
ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ ಬಹಿರಂಗ: ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲು

ಬಳ್ಳಾರಿ: ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು ಮತ್ತು ವಿಳಾಸ ಬಹಿರಂಗಪಡಿಸಿದ ಆರೋಪದಡಿ ಮಾಜಿ ಸಚಿವ ಶ್ರೀರಾಮುಲು ವಿರುದ್ಧ ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ.17ರಂದು ನಡೆದ ಬಿಜೆಪಿ ಸಮಾವೇಶದಲ್ಲಿ ಶ್ರೀರಾಮುಲು ಭಾಷಣ ಮಾಡಿದ್ದರು. ಈ ವೇಳೆ ಪೋಕ್ಸೋ ಕೇಸ್‌ನ ಸಂತ್ರಸ್ತೆಯ ಹೆಸರು, ವಿಳಾಸ, ತರಗತಿ ಮತ್ತು ಶಾಲೆಯ ಹೆಸರನ್ನು ಬಹಿರಂಗಪಡಿಸಿದ್ದರು.
ಈ ಆರೋಪದ ಮೇರೆಗೆ ಶ್ರೀರಾಮುಲು ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.